ಹೊಸ ವರ್ಷದ ಸಂಭ್ರಮ: ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಶುಭಾಶಯ

Share
0Shares

ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ’ ಎಂದು ಶುಭಾಶಯ ತಿಳಿಸಿದ್ದಾರೆ. ‘ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ-ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ’ ಎಂದು ಹಾರೈಸಿದ್ದಾರೆ. ‘ಹೊಸ ವರ್ಷವು ಸಮೃದ್ಧಿಯನ್ನು ತರಲಿ, ಹೊಸ ಅವಕಾಶ ಸಾಧನೆಯೊಂದಿಗೆ ಗುರುತಿಸ್ಪಡಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ವರ್ಷದ ಶುಭಾಶಯ ತಿಳಿಸಿದ್ದು, ‘2025ನೇ ವರ್ಷ ಶುಭ ತರಲಿ, ಎಲ್ಲರ ಮನ ಮನೆಗಳಲ್ಲಿ ಸುಖ ಶಾಂತಿ, ನೆಮ್ಮದಿ ಸಮೃದ್ಧಿ ನೆಲೆಸಲಿ’ ಎಂದು ಹೇಳಿದ್ದಾರೆ. ‘ಹೊಸ ವರ್ಷದಲ್ಲಿ ಭಾರತದ ಸಾಧನೆ ದಿಗಂತಕ್ಕೇರುವುದರ ಜೊತೆಗೆ, ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸಿನ ವಿಕಸಿತ ಭಾರತ ಸಾಕಾರಕ್ಕೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ’ ಎಂದು ಮನವಿ ಮಾಡಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಈ ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಸಂತೋಷ, ಸಮೃದ್ಧಿ, ನೆಮ್ಮದಿ ಮತ್ತು ಯಶಸ್ಸನ್ನು ತರಲಿ’ ಎಂದು ಶುಭ ಹಾರೈಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282