0Shares
Post Views: 51
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮ*ಹತ್ಯೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು. ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ ವೇಳೆ ತಳ್ಳಾಟ, ನೂಕಾಟವೂ ನಡೆಯಿತು. ಕಲಬುರಗಿಯಲ್ಲಿ ಪ್ರಿಯಾಂಕ್ ವಿರುದ್ಧ ಪ್ರತಿಭಟನೆ ನಡೆದರೆ, ಮಂಡ್ಯದಲ್ಲಿ ಪರವಾಗಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿಟಿ.ರವಿ ಫೋಟೋಗೆ ಮಸಿ ಬಳಿದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಎರಡು ದಿನ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಒಳ್ಳೆ ರೀತಿಯಲ್ಲಿ ಆತಿಥ್ಯ ಕೊಡುತ್ತೇನೆ ಎಂದಿದ್ದರು. ಇದೀಗ ಅದರಂತೆಯೇ ಮುತ್ತಿಗೆ ಹಾಕಲು ಬಂದ ಬಿಜೆಪಿ ನಾಯಕರಿಗೆ ಎಳನೀರು, ಕಾಫಿ, ಟೀ ವ್ಯವಸ್ಥೆ ಮಾಡಲಾಗಿದ್ದು ಗಮನ ಸೆಳೆಯಿತು.
0Shares