0Shares
Post Views: 95
ಬೆಂಗಳೂರು: ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ಜನವರಿ 31ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. ಬರೊಬ್ಬರಿ ಆರು ಬಾರಿ ಗಡುವು ವಿಸ್ತರಿಸಿದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು.
0Shares