0Shares
Post Views: 57
ನವದೆಹಲಿ: ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎಐ ಫೋಟೊಗಳು ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಉತ್ತರ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮೂಲಗಳ ಪ್ರಕಾರ, ಆಮ್ ಆದ್ಮಿ ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಪ್ರಧಾನಿ ಮತ್ತು ಗೃಹ ಸಚಿವರ ಕೆಲವು ಆಕ್ಷೇಪಾರ್ಹ ಫೋಟೊಗಳು ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡಿದ್ದರ ಬಗ್ಗೆ ಬಿಜೆಪಿ ದೂರು ನೀಡಿದೆ. ಎಫ್ ಐಆರ್ ಕುರಿತಂತೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ, ಜನವರಿ 10 ಮತ್ತು ಜನವರಿ 13ರಂದು ಎಎಪಿ ಫೋಟೊ ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡಿದೆ. ಎಐ ಡೀಪ್‌ಫೇಕ್ ತಂತ್ರಜ್ಞಾನದಿಂದ ಮಾಡಲಾದ ವಿಡಿಯೊಗಳ ಪೈಕಿ ಒಂದರಲ್ಲಿ 90ರ ದಶಕದ ಬಾಲಿವುಡ್ ಚಿತ್ರದ ದೃಶ್ಯವನ್ನು ತೋರಿಸಲಾಗಿದೆ. ಅದರಲ್ಲಿ ಖಳನಾಯಕರ ಮುಖಗಳ ಬದಲು ಬಿಜೆಪಿ ನಾಯಕರ ಮುಖಗಳನ್ನು ಜೋಡಿಸಲಾಗಿದೆ. ಆಡಿಯೊವನ್ನು ದೆಹಲಿ ಚುನಾವಣೆಯ ಸಂಭಾಷಣೆಗೆ ಬದಲಾಯಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
0Shares