ಗೃಹ ಪ್ರವೇಶ ವೇಳೆಯೇ ಗ್ಯಾಸ್ ದುರಂತ: 6 ಜನರ ಸ್ಥಿತಿ ಗಂಭೀರ

Share
0Shares

ದೇವನಹಳ್ಳಿ: ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್​ ಲೀಕ್​ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ. ರವಿಕುಮಾರ್​(41), ವರ್ಷಿತಾ(21), ಅನುಸೂಯ(37), ಭಾಗ್ಯಮ್ಮ(55), ಚಿರಂತ್​(11), ಮಿಥುನ್​​ (14) ಗಂಭೀರವಾಗಿ ಗಾಯಗೊಂಡವರು. ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282