ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ಗವರ್ನರ್

Share
0Shares
 ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಇದರ ಜೊತೆಗೆ 10 ವರ್ಷಗಳ ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡವು ವಿಪರೀತವಾಗಿದೆ ಎಂಬ ಅಂಶವನ್ನು ಒಳಗೊಂಡಂತೆ ರಾಜ್ಯಪಾಲರು ತಿರಸ್ಕಾರಕ್ಕೆ ಹಲವು ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ, ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ” ಎಂದು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ.

Show less

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282