ಯುವಜನರ ಹಠಾತ್ ಮೃತ್ಯು: ತನಿಖೆಗೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

Share
0Shares
 ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಇ-ಮೇಲ್ ಮೂಲಕ, ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿದ್ದರು. ಆದ್ದರಿಂದ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282