ವಯನಾಡ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆದಿದೆ. 26 ವರ್ಷಗಳ ಬಳಿಕ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಗೊಂಡಿದೆ. ಈ ಕುರಿತು ಕೇರಳದ ವಯನಾಡ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ‘ರಾಷ್ಟ್ರ ರಾಜಧಾನಿಯ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ’ ಎಂದು ಹೇಳಿದ್ದಾರೆ. ‘ದೆಹಲಿಯ ಜನರು ಬೇಸತ್ತು ಹೋಗಿದ್ದರು. ಅವರು ಬದಲಾವಣೆಯನ್ನು ಬಯಸಿದ್ದಾರೆ. ಗೆದ್ದವರಿಗೆಲ್ಲ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ. ಸತತ ಮೂರನೇ ಬಾರಿಯೂ ದೆಹಲಿ ಜನತೆಯ ಹೃದಯ ಗೆಲ್ಲುವಲ್ಲಿ ವಿಫಲವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ‘ನಾವು ಕಷ್ಟಪಟ್ಟು ಅವಿರತವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಲೇ ಇರಬೇಕು’ ಎಂದು ಹೇಳಿದ್ದಾರೆ.
Share