0Shares
Post Views: 20
ಹಗರಿಬೊಮ್ಮನಹಳ್ಳಿ: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ನಂದಿಪುರ ಗ್ರಾಮದಲ್ಲಿ ದೊಡ್ಡಬಸವೇಶ್ವರ ರಥೋತ್ಸವಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ವೈಯಕ್ತಿಕ ಜೀವನವೇ ಬೇರೆ, ರಾಜಕಾರಣವೇ ಬೇರೆ. ಆದರೆ, ನನ್ನ ಮತ್ತು ಜನಾರ್ದನ ರೆಡ್ಡಿ ಸಂಬಂಧ ಇಲ್ಲಿಗೆ ಅಂತ್ಯಗೊಂಡಂತೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸುವುದಾದರೆ ನನಗೊಂದು ಅವಕಾಶ ಕೊಡಿ ಎಂದು ಕೇಳಿದ್ದೇನೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸರಿ ಎಂದು ಹೇಳಿದರು. ಕೂಡ್ಲಿಗಿ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಈಗಲೇ ಏನನ್ನೂ ಹೇಳಲಾಗದು. ಯಾವ ಕ್ಷೇತ್ರ ಎಸ್ಟಿಗೆ ಮೀಸಲಿರುವುದೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು. ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಹಾಗಾಗಿ, ಬಿಜೆಪಿ ಗೆಲ್ಲಿಸಲು ರಾಜ್ಯಾದ್ಯಂತ ಕೆಲಸ ಮಾಡುವೆ ಎಂದು ತಿಳಿಸಿದರು.
Show less
0Shares