ಮೌಲಾನಾ ಅಬ್ದುಲ್ ಕಲಾಮ್ ಆಜಾದ್ಅ ಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ನವೆಂಬರ್ ೧೧, ೧೮೮೮ ಮೆಕ್ಕಾ, ಸೌದಿ ಅರೇಬಿಯಾದಲ್ಲಿ ಜನಿಸಿದರು , ಫೆಬ್ರುವರಿ ೨೨, ೧೯೫೮
ದೆಹಲಿಯಲ್ಲಿ ನಿಧನರಾದರು.
ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು.
ಅಕ್ಟೋಬರ್ ೧೯೨೦ ರಂದು ಅವರನ್ನು ‘ಜಾಮಿಯಾ ಮಿಲಿಯಾ ಇಸ್ಲಾಮಿಯಾ’ ಸ್ಥಾಪನಾ ಸಮಿತಿಗೆ ಆಯ್ಕೆ ಮಾಡಲಾಯಿತು. ಆಲೀಘಡದಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾನಿಲಯವನ್ನು ದಿಲ್ಲಿಗೆ ಸ್ಥಳಾಂತರಿಸಿದರು. ಈ ವಿಶ್ವವಿದ್ಯಾಲಯದ ಮುಖ್ಯ ದ್ವಾರಕ್ಕೆ ಇವರ ಹೆಸರನ್ನೇ ಇಡಲಾಗಿದೆ.
ಗಾಂಧೀಜಿಯವರ ‘ಸ್ವದೇಶಿ’, ‘ಸ್ವರಾಜ್’ ಚಿಂತನೆಗಳಿಗೆ ಮಾರು ಹೋಗಿ ಅವರ ಜೊತೆ ನಿರಂತರವಾಗಿದ್ದ ಅಬ್ದುಲ್ ಕಲಾಂ ೧೯೨೩ರ ವರ್ಷದಲ್ಲಿ ತಮ್ಮ ೩೫ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರು ವಯಸ್ಸಿನವರಾಗಿದ್ದರು.
Share