ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಸಂಪುಟ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರು ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಆಯ್ಕೆಯಾಗಿದ್ದಾರೆ. ವಿಜೇಂದರ್ ಗುಪ್ತಾ ಅವರು ಮೂರು ಬಾರಿ ಶಾಸಕರಾಗಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ರೋಹಿಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗುಪ್ತಾ ಅವರು 37 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
Share