ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯ ಕುರಿತು ಸಚಿವೆ ಪ್ರತಿಕ್ರಿಯೆ ನೀಡಿದ ಸಚಿವರು, ಘಟನೆಯನ್ನು ನಾನು ಖಂಡಿಸುತ್ತೆನೆ. ಘಟನೆ ನಡೆದು ಐದೇ ನಿಮಿಷಕ್ಕೆ ಕಮೀಷನರ್ ಜೊತೆ ನಾನು ಮಾತನಾಡಿದ್ದೆ. ಯಾರು ತಪ್ಪಿತಸ್ಥರು ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ನಾವೆಲ್ಲರೂ ಮೊದಲು ಭಾರತೀಯರು ಕನ್ನಡಿಗರು ಸ್ವರಾಜ್ಯದ ಬಗ್ಗೆ ಮಾತನಾಡಿದಾಗ ನಾಲ್ಕೈದು ಪುಂಡರು
Share