ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅವರು ಅಮೆರಿಕದ ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 5.57ಕ್ಕೆ ಭೂಮಿಗೆ ವಾಪಾಸ್ಸಾಗಲಿದ್ದಾರೆ ಎಂದು ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಖಚಿತಪಡಿಸಿದೆ.
ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರನ್ನು ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ರಾಫ್ಟ್ ನಲ್ಲಿ ಭೂಮಿಗೆ ವಾಪಾಸ್ಸು ಕರೆತರಲಾಗುತ್ತಿದೆ. ಸ್ಪೇಸ್ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ರಾಫ್ಟ್ ರವಿವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸಿತ್ತು. ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ನಾಸಾ ಈ ಕುರಿತು ಪೋಸ್ಟ್ ಮಾಡಿದ್ದು, ಗಗನಯಾತ್ರಿಗಳನ್ನು ಯಶಸ್ವಿಯಾಗಿ ಭೂಮಿಗೆ ಕರೆತರುವ ಕೆಲಸ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್) ಆರಂಭವಾಗಿದೆ ಎಂದು ತಿಳಿಸಿದೆ.
Share